ಕುಂದಾಪುರ: ಬೈಂದೂರು ಪೊಲೀಸರು ದನ ಕಳವುಗೈದು ಸಾಗಾಟ ಮಾಡಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳ ಸಹಿತ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಗಳು ಮುಹಮ್ಮದ್ ಕೈಪ್ ಸಾಸ್ತಾನ ಮತ್ತು ಮುಹಮ್ಮದ್ ಸುಹೇಲ್ ಖಾದರ್ ಉಚ್ಚಿಲ ಎಂದು ತಿಳಿದು ಬಂದಿದೆ.
ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಾಗ್ಗೆ ನಡೆಯುತ್ತಿದ್ದ ದನ ಕಳ್ಳತನ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆ ಬಗ್ಗೆ ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ಮಾರ್ಗದರ್ಶನದಲ್ಲಿ ಪ್ರಕರಣದ ತನಿಖೆಗೆ ಮೂರು ತಂಡಗಳನ್ನು ರಚಿಸಲಾಗಿತ್ತು.
ಈ ಹಿನ್ನಲೆಯಲ್ಲಿ ಕಾರ್ಯಚರಣೆಯ ಮೂಲಕ ಬೈಂದೂರು ಪೊಲೀಸರು ದನ ಕಳವುಗೈದು ಸಾಗಾಟ ಮಾಡಿದ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಾನುವಾರುಗಳನ್ನು ಕಳವು ಮಾಡಿ ಸಾಗಾಟ ಮಾಡಿದ ಕಾರುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಲ್ಲದೆ ಕಾರಿನಲ್ಲಿ ಸಾಗಾಟ ಮಾಡಿದ 4 ದನಗಳನ್ನು ರಕ್ಷಿಸಿ ಗೋಶಾಲೆ ಬಿಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.