26
ಕಲಬುರಗಿ: ಮಾದಕದ್ರವ್ಯ ಸಾಗಾಟ ಆರೋಪದಲ್ಲಿ ಕಲಬುರಗಿ ಕಾಂಗ್ರೆಸ್ ಮುಖಂಡರೊಬ್ಬರನ್ನು ಮಹಾರಾಷ್ಟ್ರದ ಕಲ್ಯಾಣ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.
ಬಂಧಿತ ಕಾಂಗ್ರೆಸ್ ಮುಖಂಡ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಲಿಂಗರಾಜ ಕಣ್ಣಿ ಸಿಕ್ಕಿ ಬಿದ್ದಿದ್ದಾರೆ ಎಂದು ಹೇಳಲಾಗಿದೆ.
ನಿಷೇಧಿತ 120 ಕೊಡೆನೈನ್ ಸಿರಪ್ ಹೊಂದಿದ್ದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.