18
ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿ ಮುಂಡಾಜೆ ಗ್ರಾಮದ ನಿವಾಸಿ ಜೇಮ್ಸ್ ಕಾರಿಮಲ (52) ಎಂದು ತಿಳಿದು ಬಂದಿದೆ.
ಕೆಲವು ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಇವರಿಗೆ ಅಲ್ಲಿ ಜ್ವರ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಪ್ರಯೋಜನವಾಗಲಿಲ್ಲ. ಕಿಡ್ನಿ ವೈಫಲ್ಯವಾಗಿರುವುದು ಕಂಡು ಬಂದಿದ್ದು ಗುರುವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.