ಉಡುಪಿ: 76 ಬಡಗುಬೆಟ್ಟು ಗ್ರಾಮದ ವ್ಯಕ್ತಿಯೋರ್ವರು ಉಸಿರಾಟದ ಸಮಸ್ಯೆಯಿಂದಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿ ಕಸ್ತೂರ್ಬಾ ನಗರದ ನಿವಾಸಿ ಜಾನ್ಸನ್ ಸದಾನಂದ ಕರ್ಕಡ (66) ಎಂದು ತಿಳಿದು ಬಂದಿದೆ.
ಇವರು ಮಂಗಳೂರಿನ ಎಸ್‌ಬಿಐ ಬ್ಯಾಂಕ್‌ನಲ್ಲಿ ಹಿರಿಯ ಅಧಿಕಾರಿಯಾಗಿದ್ದು, ಪ್ರಸ್ತುತ ನಿವೃತ್ತರಾಗಿದ್ದರು. ಕಿಡ್ನಿ ಹಾಗೂ ಶ್ವಾಸಕೋಶದಲ್ಲಿ ಉಂಟಾಗಿದ್ದ ಕಾಯಿಲೆಗೆ ಸಂಬಂಧಿಸಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ 52 ದಿನಗಳ ಕಾಲ ಚಿಕಿತ್ಸೆ ಪಡೆದು ಜು. 5ರಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆಗೊಂಡು ವೈದ್ಯರು ತಿಳಿಸದಂತೆ ಮನೆಯಲ್ಲಿಯೇ ಚಿಕಿತ್ಸೆ ಮುಂದುವರಿಸುತ್ತಿದ್ದರು.
ಜು. 12ರಂದು ಬೆಳಗ್ಗೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಅದೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈ ಸಂದರ್ಭ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.