ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದಲ್ಲಿ ಹೃದಯಾಘಾತದಿಂದ 50 ವರ್ಷದ
ಗೃಹಿಣಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಮೃತ ಗೃಹಿಣಿ ಮುತ್ತಿಗೆಪುರ ಗ್ರಾಮದ ಗೋಪಾಲ್ ಅವರ ಪತ್ನಿ ಲಲಿತಾ (50) ಎಂದು ತಿಳಿದು ಬಂದಿದೆ.
ಮೃತದೇಹ ಮನೆಯ ಬಾಗಿಲ ಬಳಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸಂದರ್ಭ ಲಲಿತಾ ಮನೆಯಲ್ಲಿ ಒಬ್ಬರೇ ಇದ್ದರು. ಪತಿ ಗೋಪಾಲ್ ಭಾನುವಾರ ರಾತ್ರಿ ಕಾರು ಬಾಡಿಗೆಗಾಗಿ ಮನೆ ಬಿಟ್ಟು ಹೊರ ಹೋಗಿದ್ದರು. ಪಕ್ಕದ ಮನೆಯವರು ಸೋಮವಾರ ಬೆಳಗ್ಗೆ ಶವ ಕಂಡ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ಕೊಂಡೊಯಲಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಹೃದಯಾಘಾತವೇ ಸಾವಿಗೆ ಕಾರಣ ಎಂದು ವೈದ್ಯಕೀಯ ವರದಿ ಸ್ಪಷ್ಟಪಡಿಸಿದೆ ಎಂದು ತಿಳಿದು ಬಂದಿದೆ.