ಕಾಪು: ಉಚ್ಚಿಲದಲ್ಲಿ ಕೆಲಸಕ್ಕೆ ಹೋಗಲು ಮನೆಯಿಂದ ಬಂದು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವ್ಯಕ್ತಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿ ಉಡುಪಿ ಮಣಿಪಾಲದ ಕನ್‌ಸ್ಟ್ರಕ್ಷನ್ ಸಂಸ್ಥೆಯೊಂದರ ಉದ್ಯೋಗಿ ಪ್ರಸ್ತುತ ಪತ್ನಿಯ ಜೊತೆಗೆ ಪಣಿಯೂರಿನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಕುರ್ಕಾಲು ನೂಜಿ ಹೊಸಮನೆಯ ಜಗದೀಶ್ ಶೆಟ್ಟಿ (57) ಎಂದು ತಿಳಿದು ಬಂದಿದೆ.
ಜಗದೀಶ್ ಸೋಮವಾರ ಬೆಳಗ್ಗೆ ಎಂದಿನಂತೆ ಉದ್ಯೋಗಕ್ಕೆ ತೆರಳಲೆಂದು ಉಚ್ಚಿಲ ಬಸ್ ನಿಲ್ದಾಣಕ್ಕೆ ಬಂದಿದ್ದರು. ಬಸ್‌ಗಾಗಿ ಕಾಯುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಅಲ್ಲೇ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಕೂಡಲೇ ಸ್ಥಳೀಯರು ಮತ್ತು ರಿಕ್ಷಾ ಚಾಲಕರು ಅವರನ್ನು ಉಪಚರಿಸಿ ಉಡುಪಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.