50
ಪುತ್ತೂರು: ಪುತ್ತೂರಿನ ಬೊಳುವಾರು ಎಂಬಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತನನ್ನು ಹಾಸನ ಮೂಲದ ರಾಜು (45), ಪ್ರಸ್ತುತ ಬಂಟ್ವಾಳದಲ್ಲಿ ವಾಸಿಸುತ್ತಿದ್ದಾನೆ ಎಂದು ತಿಳಿದು ಬಂದಿದೆ.
ಜು.14ರಂದು ಮದ್ಯಾಹ್ನ ಬಂದ ಮಾಹಿತಿ ಮೇರೆಗೆ, ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ, ಆತನನ್ನು ಸಾರ್ವಜನಿಕರ ಸಹಾಯದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.