28
ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತ ಬಾಲಕಿ ಕಾಳಂಗೇರಿ ದೀಕ್ಷಾ(12) ಎಂದು ತಿಳಿದು ಬಂದಿದೆ.
ಈಕೆ 6ನೇ ತರಗತಿಯಲ್ಲಿ ಓದುತ್ತಿದ್ದು, ಶಾಲೆಗೆ ತೆರಳಲು ಎಂದಿನಂತೆ ಸಿದ್ಧಳಾಗಿ ಹೋಗುತ್ತಿದ್ದಳು. ಈ ಸಂದರ್ಭ ಏಕಾಏಕಿ ಕುಸಿದು ಬಿದ್ದಿದ್ದಾಳೆ ಎಂದು ತಿಳಿದು ಬಂದಿದೆ.
ಕೂಡಲೇ ಕುಟುಂಬಸ್ಥರು ಬಾಲಕಿಯನ್ನು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದಿದ್ದಾರೆ. ಆದರೆ ದಾರಿ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ದೀಕ್ಷಾಳ ಸಾವಿಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.