31
ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್‌ಗೆ ಕಾರು ಉರುಳಿ ಬಿದ್ದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈಕುರಿತು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.