17
ಬಂಟ್ವಾಳ: ಇನ್ನೋವಾ ಕಾರೊಂದು ಸ್ಕೂಟರಿಗೆ ಡಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬಾಳ್ತಿಲ ಗ್ರಾಮದ ದಾಸಕೋಡಿಯಲ್ಲಿ ನಡೆದಿದೆ.
ಗಾಯಗೊಂಡಿರುವವರು ಪುತ್ತೂರು ಪಟ್ಟೂರು ನಿವಾಸಿ ವೈ.ಎಸ್.ತೇಜಸ್ ಹಾಗೂ ಸಹಸವಾರ ಗೌತಮ್ ಎಂದು ತಿಳಿದು ಬಂದಿದೆ.
ಗಾಯಾಳುಗಳು ಬಿ.ಸಿ.ರೋಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಚಾಲಕ ಕೆ.ಜಗದೀಶ ನಾಯ್ಕ ಇನ್ನೋವಾ ಕಾರನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.