22
ಸುಳ್ಯ: ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕ ಮೂಲತಃ ಕೇರಳದವರಾಗಿದ್ದ ಮಹೇಶ್ (31) ಎಂದು ತಿಳಿದು ಬಂದಿದೆ.
ಮಹೇಶ್ ಪೆರ್ಲಂಪಾಡಿಯ ಸಂಬಂಧಿಕರ ಮನೆಗೆ ಬಂದಿದ್ದು, ಎರಡು ದಿನಗಳಿಂದ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.
ಹುಡುಕಾಡಿದಾಗ ಪೆರ್ಲಂಪಾಡಿಯ ಹೊಳೆ ದಡದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಮೃತದೇಹ ಸೋಮವಾರ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.