16
ಕಲಬುರಗಿ: ಜೇವರ್ಗಿ ತಾಲೂಕಿನ ಮುತ್ತಕೊಡ ಗ್ರಾಮದಲ್ಲಿ ಬಿರುಗಾಳಿ, ಮಳೆಗೆ ಮನೆಯ ಮೇಲ್ಛಾವಣಿಯ ಒಂದು ಪಾರ್ಶ್ವ ಕುಸಿದು ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.
ಮೃತಳನ್ನು ಅಹಾಧ್ಯ ಮಲ್ಲಪ್ಪ ಪಸಪೂರ (5) ಎಂದು ಗುರುತಿಸಲಾಗಿದೆ.
ಮನೆಯೊಳಗೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಏಕಾಏಕಿ ಮೇಲ್ಛಾವಣಿ ಕುಸಿದುಬಿದ್ದಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಘಟನೆಯ ವೇಳೆ ಬಾಲಕಿ ಮೂವರು ಸಹೋದರಿಯರು ಇನ್ನೊಂದು ಕೋಣೆಯಲ್ಲಿದ್ದರೆ, ಅಡುಗೆ ಮನೆಯಲ್ಲಿದ್ದ ತಾಯಿ ಯಾವುದೇ ಅಪಾಯಗಳಿಲ್ಲದೇ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.