Home News ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ ಆಯ್ಕೆ

ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ ಆಯ್ಕೆ

by admin
0 comments

ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಇದರ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಸೂರಜ್ ಹೊಟೇಲ್ ನ ಸಭಾಂಗಣದಲ್ಲಿ ನಡೆದ ಅಸೋಸಿಯೇಶನ್ ನ ನಾಲ್ಕನೇ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಮಹಾಸಭೆಯ ಅಧ್ಯಕ್ಷತೆಯನ್ನು ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ ವರದಿ ವಾಚಿಸಿದರು. ನರಸಿಂಹ ಸುವರ್ಣ ಲೆಕ್ಕಪತ್ರ ಮಂಡಿಸಿದರು.‌ ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ಕೈಗೊಂಡ ಕೆಲಸ ಕಾರ್ಯಗಳ ವಿವರವನ್ನು ಸಭೆಯ ಮುಂದಿಟ್ಟರು.‌

ಬಳಿಕ ನಡೆದ ಪದಾಧಿಕಾರಿಗಳ ಆಯ್ಕೆಯಲ್ಲಿ ರಮೇಶ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಮುಂದಿನ ಎರಡು ವರ್ಷದ ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ತಾರಾನಾಥ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿಯಾಗಿ ನರಸಿಂಹ ಸುವರ್ಣ, ಜತೆ ಕಾರ್ಯದರ್ಶಿಯಾಗಿ ಲಕ್ಷ್ಮೀ ಚಂದ್ರಶೇಖರ್ ಆಚಾರ್ಯ, ಸಂಘಟನಾ ಕಾರ್ಯದರ್ಶಿಯಾಗಿ ಪುಷ್ಪರಾಜ ಶೆಟ್ಟಿ ಕುಡುಂಬೂರು ಅವರನ್ನು ಆಯ್ಕೆ ಮಾಡಲಾಯಿತು. ಗೌರವ ಸಲಹೆಗಾರರಾಗಿ ಸತ್ಯಜಿತ್ ಸುರತ್ಕಲ್, ಬಾಳ ಜಗನ್ನಾಥ ಶೆಟ್ಟಿ ಆಯ್ಕೆಯಾದರು‌.

banner

ಸಭೆಯಲ್ಲಿ ಸುರತ್ಕಲ್ ಬಂಟರ ಸಂಘಕ್ಕೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಬಾಳ ಜಗನ್ನಾಥ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ತನುಜ ಸುಧಾಕರ್, ಮಂಜುನಾಥ ಶೆಟ್ಟಿ ಸಭೆಯಲ್ಲಿ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಉಪಾಧ್ಯಕ್ಷ ತಾರಾನಾಥ ಸಾಲ್ಯಾನ್ ಸ್ವಾಗತಿಸಿದರು. ಲಕ್ಷ್ಮೀ ಚಂದ್ರಶೇಖರ್ ಆಚಾರ್ಯ ವಂದಿಸಿದರು. ಚಂದ್ರಶೇಖರ್ ಪಾಲೇಕರ್ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಅಸೋಸಿಯೇಶನ್ ನ ಸದಸ್ಯರಿಂದ ಸಂಗೀತ ರಸಮಂಜರಿ ನಡೆಯಿತು.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.