ಬಂಟ್ವಾಳ: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ 27ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಆರೋಪಿಗಳಾದ ತುಂಬೆ ನಿವಾಸಿ ಅಭಿನ್ ರೈ (32) ಮತ್ತು ಶೃಂಗೇರಿ ನಿವಾಸಿ ರವಿ ಸಂಜಯ್ ಅವರು ಜಾಮೀನು ಕೋರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.
ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಹೀಗಾಗಿ ಆರೋಪಿಗಳ ನ್ಯಾಯಾಂಗ ಬಂಧನ ಮುಂದುವರಿದಿದೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಈಗಾಗಲೇ 10 ಮಂದಿ ಆರೋಪಿಗಳನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.