24
ಕೋಟ: ಪೂರ್ವದ್ವೇಷದ ಹಿನ್ನೆಯಲ್ಲಿ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ ಘಟನೆ ತೆಕ್ಕಟ್ಟೆಯಲ್ಲಿ ನಡೆದಿದೆ.
ಹಲ್ಲೆಗೊಳಗಾದವರು ಮಣೂರು ಪಡುಕರೆ ನಿವಾಸಿ ಭರತ್ ಎಂದು ತಿಳಿದು ಬಂದಿದೆ.
ಹಲ್ಲೆಗೈದವರು ಸ್ಥಳೀಯ ನಿವಾಸಿ ಮನೋಜ್ ಎಂದು ತಿಳಿದು ಬಂದಿದೆ.
ಭರತ್‌ನ ಬಳಿಗೆ ಬಂದ ಮನೋಜ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಳಿಕ ಕೈಯಲ್ಲಿದ್ದ ಬಿಯರ್ ಬಾಟಲಿಯಿಂದ ತಲೆಗೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ಭರತ್‌ಗೆ ಪ್ರಜ್ಞೆ ತಪ್ಪಿದ್ದು ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ