ವಿಜಯಪುರ: ನಗರದಲ್ಲಿ ನಡೆದ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಮಂಗಳವಾರ ಗುಂಡಿನ ದಾಳಿ ಮಾಡಿ ಬಂಧಿಸಿದ್ದಾರೆ.
ಗುಂಡೇಟು ತಿಂದ ಆರೋಪಿ್ಳು ಆಕಾಶ್ ಕಲ್ಲವ್ವಗೋಳ ಮತ್ತು ಸುದೀಪ್ ಅಲಿಯಾಸ್ ಸುಭಾಷ ಬಗಲಿ ಎಂದು ತಿಳಿದು ಬಂದಿದೆ.
ಆಕಾಶ್ ವಿರುದ್ಧ ಈಗಾಗಲೇ ಏಳು ಪ್ರಕರಣಗಳು ದಾಖಲಾಗಿದ್ದವು. ಇದೇ ಕೊಲೆ ಪ್ರಕರಣದ ಇನ್ನೂ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ಎಸ್.ಎಸ್.ಕಾಂಪ್ಲೆಕ್ಸ್‌ನಲ್ಲಿರುವ ಅಮರ ವರ್ಷಿಣಿ ಬ್ಯಾಂಕ್ ನ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಸುಶೀಲ್ ಕುಮಾರ ಕಾಳೆ ಎಂಬಾತನ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದರು. ಮಾರಕಾಸ್ತ್ರ ಮತ್ತು ನಾಡ ಪಿಸ್ತೂಲ್ ನಿಂದ ದಾಳಿ ನಡೆಸಿ ಪರಾರಿಯಾಗಿದ್ದರು ಎಂದು ತಿಳಿದು ಬಂದಿದೆ.
ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಸುಶೀಲ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಗಾಂಧಿ ಚೌಕ್ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು ಎಂದು ತಿಳಿದು ಬಂದಿದೆ.
ಮಂಗಳವಾರ ಬೆಳಗಿನ ಜಾವ ಆರೋಪಿಗಳು ನಗರ ಹೊರವಲಯದ ಇಟ್ಟಂಗಿಹಾಳ ಬಳಿ ಪರಾರಿಯಾಗಲು ಯತ್ನಿಸುವ ಮಾಹಿತಿ ತಿಳಿದು ಪೊಲೀಸರು ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂದರ್ಭ ಪೊಲೀಸರು ಬೆನ್ನಟ್ಟಿದಾಗ ಇಬ್ಬರು ಆರೋಪಗಳು ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಅಲ್ಲದೇ, ಪೊಲೀಸರತ್ತ ಕಲ್ಲು ತೂರಾಟಕ್ಕೆ ಮುಂದಾಗಿದ್ದಾರೆ. ಅಷ್ಟೇ ಅಲ್ಲ, ಆರೋಪಿಗಳು ತಮ್ಮ ಬಳಿಯಿದ್ದ ನಾಡ ಪಿಸ್ತೂಲ್ ಮೂಲಕ ಗುಂಡಿನ ದಾಳಿ ನಡೆಸಲು ಸಹ ಪ್ರಯತ್ನಿಸಿದ್ದಾರೆ. ಆಗ ಗಾಂಧಿ ಚೌಕ್ ಠಾಣೆ ಸಿಪಿಐ ಪ್ರದೀಪ್ ತಳಕೇರಿ ತಮ್ಮ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಇಬ್ಬರೂ ಆರೋಪಿಗಳಿಗೆ ಗುಂಡೇಟು ಬಿದ್ದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಇದೇ ವೇಳೆ, ಓರ್ವ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ಮೇಲೆ ನಡೆದ ಫೈರಿಂಗ್ ಘಟನಾ ಸ್ಥಳಕ್ಕೆ ಎಸ್ ಪಿ ಲಕ್ಷ್ಮಣ ನಿಂಬರಗಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.