ಉಡುಪಿ: ಜುಲೈ 6 ರಂದು ಬೆಳಿಗ್ಗೆ ನಾಡಾ ಗ್ರಾಮ ಪಂಚಾಯತ್ ಸಮೀಪ ಒಂದು ಬಿಳಿ ಬಣ್ಣದ ಕಾರಿನಲ್ಲಿ ಮೂರು ಜನರು ಬಂದು ನಾಡಾ ಶಾನ್ ಮೆಡಿಕಲ್ ಪಕ್ಕದಲ್ಲಿ ಮಲಗಿರುವ ದನಗಳನ್ನು ಕಾರಿಗೆ ತುಂಬಲು ಪ್ರಯತ್ನಿಸುತ್ತಿದ್ದಾಗ ದಾರಿಯಲ್ಲಿರುವ ವಾಹನವನ್ನು ನೋಡಿ ಅಲ್ಲಿಂದ ಪರಾರಿಯಾದ ಪ್ರಕರಣ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ನೌಫಲ್ (23) ಹಾಗೂ ನಿಶಾದ್ (23) ಎಂದು ತಿಳಿದು ಬಂದಿದೆ.
ಆರೋಪಿಗಳು ಶಾನ್ ಮೆಡಿಕಲ್ ಸಮೀಪ ಮಲಗಿರುವ ದನಗಳನ್ನು ಕಳವು ಮಾಡುವ ಉದ್ದೇಶದಿಂದ ಬಂದಿದ್ದು ದನವನ್ನು ಕಳವು ಮಾಡಲು ಪ್ರಯತ್ನಿಸಿದ್ದಾರೆ ಎಂದು ನೀಡಿದ ದೂರಿಗೆ ಸಂಬಂಧಿಸಿ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತು.
ಈ ಪ್ರಕರಣ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಿಂದ ವಿಶೇಷ ತಂಡ ರಚಿಸಿ ಜು.14 ರಂದು ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿಗಳಾದ ಇಬ್ಬರನ್ನು ವಶಕ್ಕೆ ಪಡೆದುಕೊಂಡು ದಸ್ತಗಿರಿ ಮಾಡಿ ಜು.15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಬಳಸಿದ ಬಿಳಿ ಬಣ್ಣದ ಸ್ವಿಪ್ಟ್ ಕಾರು ಹಾಗೂ 2 ಮೊಬೈಲ್ ಪೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.