28
ಸುರತ್ಕಲ್: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮೂಲತಃ ಉಡುಪಿ ಜಿಲ್ಲೆಯ ಇಂದ್ರಾಳಿ ಬಳಿಯ ನಿವಾಸಿ ಸದ್ಯ ಧಾರವಾಡ ಜಿಲ್ಲೆಯ ಟೋಲ್ ನಾಕ ನಿವಾಸಿ ರಾಜೇಶ್ ನಾಯ್ಕ್ ಯಾನೆ ರಾಜ್ ಯಾನೆ ರಾಜು ಪಮಾಡಿ (48) ಎಂದು ತಿಳಿದು ಬಂದಿದೆ.
ಈತನ ಮೇಲೆ ಮಂಗಳೂರು ನಗರ, ಉಡುಪಿ ಜಿಲ್ಲೆ ಉತ್ತರ ಕನ್ನಡ ಜಿಲ್ಲೆ ಧಾರವಾಡ ಹಾಗೂ ವಿವಿಧ ಕಡೆಗಳಲ್ಲಿ ಕೊಲೆ ಯತ್ನ ಕಳವು, ಹಲೈ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆ ಸಮಯ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.