25
ಮಂಗಳೂರು: ಅತ್ಯಾಚಾರ ಪ್ರಕರಣ ಸಂಬಂಧ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕಾವೂರು ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಚಂದ್ರ ನಾಯಕ್ ಎಂದು ತಿಳಿದು ಬಂದಿದೆ.
ಈತನಿಗೆ ಸಹಕರಿಸಿದ ಆರೋಪದಲ್ಲಿ ಸಂತ್ರಸ್ತೆಯ ಪತಿಯನ್ನೂ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಅತ್ಯಾಚಾರದ ಕುರಿತು ಕಾನ್ ಸ್ಟೇಬಲ್ ಚಂದ್ರ ನಾಯಕ್ ವಿರುದ್ಧ ಮಹಿಳೆಯೊಬ್ಬರು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಆರೋಪಿಗಳಾದ ಕಾನ್ ಸ್ಟೇಬಲ್ ಚಂದ್ರ ನಾಯಕ್ ಮತ್ತು ಸಂತ್ರಸ್ತೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.