ಮಂಜೇಶ್ವರ: ಕುಂಜತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಮರಾ ಅಳವಡಿಸುತ್ತಿದ್ದ ಇಬ್ಬರು ಕಾರ್ಮಿಕರು ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರು ಊರಾಳುಂಗಲ್ ಲೇಬರ್ ಕಾಂಟ್ರಾಕ್ಟ್ ಸೊಸೈಟಿಯ ಸಹ ಗುತ್ತಿಗೆದಾರರಾದ ಗುಜರಾತ್ ಕೇಂದ್ರವಾಗಿರುವ ಕಂಪೆನಿಯ ಕಾರ್ಮಿಕರಾದ ಬಿಹಾರ ನಿವಾಸಿ ರಾಜ್ ಕುಮಾರ್ ಮಾತೂರು (25) ಮತ್ತು ರಾಜಸ್ಥಾನ ನಿವಾಸಿ ದಾಮೂರ್ ಅಮಿತ್ ಗಣಪತಿ ಭಾಯಿ (23) ಎಂದು ತಿಳಿದು ಬಂದಿದೆ.
ಇನ್ನೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಮಂಗಳವಾರ ಸಂಜೆ ಆರು ಗಂಟೆಗೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ಮಿಕರು ತಮ್ಮ ವಾಹನವನ್ನು ನಿಲ್ಲಿಸಿ ಕ್ಯಾಮರಾ ಅಳವಡಿಸುತ್ತಿದ್ದಾಗ ಮಣ್ಣಾರ್‌ಕಾಡ್‌ನಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿದೆ ಎಂದು ಮಂಜೇಶ್ವರ ಪೊಲೀಸರು ತಿಳಿಸಿದ್ದಾರೆ.
ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದೇಹಗಳನ್ನು ಕಾಸರಗೋಡಿನ ಜನರಲ್ ಆಸ್ಪತ್ರೆಯಲ್ಲಿಡಲಾಗಿದೆ.
ಲಾರಿ ಚಾಲಕನನ್ನು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.