9
ಕಾರ್ಕಳ: ವ್ಯಕ್ತಿಯೋರ್ವರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರು ಮಾಳ ಗ್ರಾಮದ ಸಂಜೀವ (58) ಎಂದು ತಿಳಿದು ಬಂದಿದೆ.
ಮನೆಯಲ್ಲಿ ಸಂಜೆ ವೇಳೆ ವಾಂತಿ ಮಾಡಿಕೊಂಡು ಎದೆನೋವಿನಿಂದ ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ವೈದ್ಯರು ಪರೀಕ್ಷಿಸಿ ಸಂಜೀವ ಅವರು ಅದಾಗಲೇ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.