54
ಮಂಗಳೂರು: ಭಾರೀ ಮಳೆಯಿಂದ ಪದವಿನಂಗಡಿ ಬಳಿ ಹಿಂಬದಿ ಧರೆ ಬಿದ್ದು ಪಕ್ಕದಲ್ಲೇ ನಿಲ್ಲಿಸಿದ್ದ ಸುಮಾರು 15 ದ್ವಿಚಕ್ರ ವಾಹನ ಹಾಗೂ 1 ಕಾರು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಗುರುವಾರ ನಡೆದಿದೆ.
ಪದವಿನಂಗಡಿ ಬಳಿಯಿರುವ ಕೆನರಾ ವಿಕಾಸ್ ಪಿಯು ಕಾಲೇಜಿನ ಹಿಂಬದಿಯ ಧರೆ ಬಿದ್ದು ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಘಟನೆಯಿಂದ ಸುಮಾರು 15 ದ್ವಿಚಕ್ರ ವಾಹನ ಹಾಗೂ 1 ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.