32
ಅರಂತೋಡು: ಗೂನಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಮನೆಯ ಕಾಂಪೌಂಡ್‌ಗೆ ಗುದ್ದಿದ ಘಟನೆ ಬುಧವಾರ ಸಂಭವಿಸಿದೆ.
ಬೆಂಗಳೂರಿನಿಂದ ಸಂಪಾಜೆ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಕೇರಳದ ಮೂಲದ ವಾಹನ ಗೂನಡ್ಕದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಹೀಂ ಬೀಜದ ಕಟ್ಟೆ ಅವರ ಮನೆಯ ಕಾಂಪೌಂಡ್‌ಗೆ ಗುದ್ದಿ ನಿಂತಿತ್ತು ಎಂದು ತಿಳಿದು ಬಂದಿದೆ.
ಘಟನೆಯಿಂದ ಕಾಂಪೌಂಡ್‌ಗೆ ಹಾನಿಯಾಗಿದ್ದು ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.