12
ಹುಣಸೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹುಣಸೂರು ಪುರಸಭೆ ಮಾಜಿ ಅಧ್ಯಕ್ಷ, ಜೆಡಿಎಸ್ ಮುಖಂಡ, ಪ್ರಥಮದರ್ಜೆ ಗುತ್ತಿಗೆದಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರು ಚಿಕ್ಕಹುಣಸೂರು ಗೋವಿಂದೇಗೌಡರ ಪುತ್ರ ಶ್ರೀನಿವಾಸ್ (56) ಎಂದು ತಿಳಿದು ಬಂದಿದೆ.
ಜು.8 ರಂದು ಮನೆಯಿಂದ ಪಟ್ಟಣಕ್ಕೆ ಬರುತ್ತಿದ್ದ ವೇಳೆ ಮೈಸೂರು ರಸ್ತೆಯ ಮಂಜುನಾಥ ದೇವಾಲಯದ ಬಳಿ ನಡೆದ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಕೋಮಾ ತಲುಪಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.