24
ಪಡುಬಿದ್ರಿ: ಇಲ್ಲಿನ ಬಾರ್‌ವೊಂದರ ಕ್ಯಾಬಿನ್‌ಗೆ ಜು. 15ರ ರಾತ್ರಿ ಅಕ್ರಮ ಪ್ರವೇಶಿಸಿದ ಆರೋಪಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ಕೊಲೆಯತ್ನ ನಡೆಸಿದ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೂರಿ ಇರಿದ ಆರೋಪಿ ಅಲಗೇಶ್ ಎಂದು ತಿಳಿದು ಬಂದಿದೆ.
ಚೂರಿ ಇರಿತಕ್ಕೊಳಗಾದ ವ್ಯಕ್ತಿ ಸಾಂತೂರು ಸತೀಶ್ ಆಚಾರ್ಯ (45) ಎಂದು ತಿಳಿದು ಬಂದಿದೆ.
ಆರೋಪಿಯು ಸತೀಶ್ ಅವರ ತಲೆ, ಕಿವಿ ಹಾಗೂ ಹೊಟ್ಟೆಗೆ ತನ್ನ ಬಳಿಯಿದ್ದ ಚೂರಿಯಿಂದ ಇರಿದು ಕೊಲೆಯತ್ನ ನಡೆಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.