Home News ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ: 50 ಮಂದಿ ಮೃತ್ಯು

ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ: 50 ಮಂದಿ ಮೃತ್ಯು

by admin
0 comments

ಇರಾಕ್: ಶಾಪಿಂಗ್ ಮಾಲ್ ವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 50 ಮಂದಿ ಮೃತಪಟ್ಟಿರುವ ಘಟನೆ ಪೂರ್ವ ಇರಾಕ್ ನ ಕುಟ್ ನಗರದಲ್ಲಿ ವರದಿಯಾಗಿದೆ.

“ಮೃತರ ಸಂಖ್ಯೆ 50ಕ್ಕೆ ತಲುಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಲು ಕಾರಣವೇನು ಎಂಬ ಕುರಿತು ಅಧಿಕಾರಿಗಳು ತನಿಖೆ ಪ್ರಾರಂಭಿಸಿದ್ದಾರೆ” ಎಂದು ವಾಸಿಟ್ ಪ್ರಾಂತ್ಯದ ಗವರ್ನರ್ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಈ ಪ್ರಾಂತ್ಯದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸ್ಥಳೀಯ ಅಧಿಕಾರಿಗಳು, ಕಟ್ಟಡ ಮತ್ತು ಮಾಲ್ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಗವರ್ನರ್ ಸಂಬಂಧಿಸಿದ ಪ್ರಾಧಿಕಾರಗಳಿಗೆ ಸೂಚಿಸಿದ್ದಾರೆ ಎಂದು ವರದಿ ತಿಳಿಸಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.