25
ಕಾಸರಗೋಡು: ಪೊಯಿನಾಚಿ ಸಮೀಪದ ಬಟ್ಟತ್ತೂರು ಎಂಬಲ್ಲಿ ನಿಲುಗಡೆಗೊಳಿಸಿದ್ದ ಬಸ್ಸಿನ ಹಿಂಭಾಗಕ್ಕೆ ಬೈಕ್
ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರು ಕುನಿಯ ನಿವಾಸಿ ಕೆ.ವಿ.ಅಬ್ದುಲ್ ರಹ್ಮಾನ್ (19) ಎಂದು ತಿಳಿದು ಬಂದಿದೆ.
ರಾಷ್ಟ್ರೀಯ ಹೆದ್ದಾರಿಯ ಬಟ್ಟತ್ತೂರಿನಲ್ಲಿ ಮಂಗಳವಾರ ಸಂಜೆ ಈ ಅಪಘಾತ ಸಂಭವಿಸಿದೆ.
ಗಂಭೀರ ಗಾಯಗೊಂಡಿದ್ದ ರಹ್ಮಾನ್ ರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಗುರುವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಬೇಕಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆ.ವಿ.ಅಬ್ದುಲ್ ರಹ್ಮಾನ್ ಎಸ್ಸೆಸ್ಸೆಫ್ ಕುನಿಯ ಘಟಕದ ಕಾರ್ಯದರ್ಶಿಯಾಗಿದ್ದರು.