Home News ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

by admin
0 comments

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಏಳು ತಾಲೂಕುಗಳ ಸರಕಾರಿ ಶಾಲೆಯ ಮಕ್ಕಳಿಗೆ ಕೊಡೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಹಾಗೂ ಉಡುಪಿ ತಾಲೂಕಿನ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮ ಗುರುವಾರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ನೋರ್ಥ್ ಶಾಲೆ ) ಉಡುಪಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉಡುಪಿ ತಾಲೂಕು ಉಪ ತಹಶೀಲ್ದಾರ್ ರಾದ ರವಿಶಂಕರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಂಚಾಲಕರಾದ ಶ್ರೀಯುತ ಪ್ರಸನ್ನ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಉಡುಪಿ ಡಯಟ್ ಪ್ರಾಂಶುಪಾಲರಾದ ಅಶೋಕ್ ಕಾಮತ್, ಶ್ರೀ ಗೋಪಾಲಕೃಷ್ಣ ಜೋಗಿ ಪೊಲೀಸ್ ಉಪ ನಿರೀಕ್ಷಕರು ಉಡುಪಿ ಹಾಗೂ ಪೊಲೀಸ್ ಉಪ ನಿರೀಕ್ಷಕರಾದ ನಾರಾಯಣ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಸಪ್ಪ ಚನ್ನಪ್ಪನವರ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾದ್ಯಾಯನಿ ಸಾವಿತ್ರಿ ಕೆ., ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯಸ್ವಾಮಿ ಚಿಕ್ಕಮಠ, ಹಳೆ ವಿದ್ಯಾರ್ಥಿ ಸಂಘದ ಸತೀಶ್ ರಾವ್, ಕರವೇ ಗೌರವಾಧ್ಯಕ್ಷರಾದ ಅನ್ಸಾರ್ ಅಹಮದ್, ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಕರವೇ ಉಡುಪಿ ಮಹಿಳಾ ಜಿಲ್ಲಾಧ್ಯಕ್ಷರಾದ ಜ್ಯೋತಿ ಸೇರಿಗಾರ್ತಿ ಉಡುಪಿ ತಾಲೂಕು ಅಧ್ಯಕ್ಷ ಸತೀಶ್ ಸನಿಲ್, ಉಡುಪಿ ತಾಲೂಕು ನಿಕಟ ಪೂರ್ವ ಅಧ್ಯಕ್ಷ ಸುಧೀರ್ ಪೂಜಾರಿ, ವಿದ್ಯಾರ್ಥಿ ನಾಯಕ ಪರಶುರಾಮ್ ಚೌಹಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

banner

ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ ಕೊಡೆಯನ್ನ ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರವೇ ರಾಜ್ಯ ಸಂಚಾಲಕರಾದ ಪ್ರಸನ್ನ ಶೆಟ್ಟಿ ಅವರು ಕರವೇ ಉಡುಪಿ ಜಿಲ್ಲಾ ಮಹಿಳಾ ಘಟಕ ಆಯೋಜಿಸಿದ ಕಾರ್ಯಕ್ರಮ ಬಹಳ ಅರ್ಥಪೂರ್ಣವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳು ನಡೆಯಲಿ ಎಂದು ಶುಭ ಹಾರೈಸಿದರು.

ಗುರು ಪೂರ್ಣಿಮೆ ದಿನಾಚರಣೆಯ ಅಂಗವಾಗಿ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯನಿ ಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು, ಶಿಕ್ಷಕ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನುಷಾ ಆಚಾರ್ ಪಳ್ಳಿ ಪ್ರಾಸ್ತವಿಕ ನುಡಿದು ಸ್ವಾಗತಿಸಿದರು. ಮೋಹಿನಿ ಕಾರ್ಯಕ್ರಮ ನಿರೂಪಿಸಿದರು. ಆಶಾ ವಂದಿಸಿದರು.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.