21
ಗಂಗೊಳ್ಳಿ: ಇಲ್ಲಿನ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ವೊಬ್ಬರು ಅಸೌಖ್ಯದಿಂದ ಜು.17ರಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರು ಬೈಂದೂರು ಸೆಳ್ಳೆಕುಳ್ಳಿ ಮೂಲದ ರಾಮಚಂದ್ರ (48) ಎಂದು ತಿಳಿದು ಬಂದಿದೆ.
ಹಿರಿಯಡ್ಕ, ಮಣಿಪಾಲ ಹಾಗೂ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಕಳೆದ ಮೂರು ವರ್ಷಗಳಿಂದ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.