ಸುಳ್ಯ: ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ಆರೋಪಿ ಅಬ್ದುಲ್ ರೆಹಮಾನ್‌ಗೆ ಸೇರಿದ ಕಾರು ಮತ್ತು ಬೈಕನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರವೀಣ್ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸೋಮವಾರಪೇಟೆ ತಾಲೂಕಿನ ಕಲಕಂದೂರು ನಿವಾಸಿ ಅಬ್ದುಲ್ ರಹಿಮಾನ್‌ನನ್ನು ಎನ್‌ಐಎ ಅಧಿಕಾರಿಗಳು ಕೇರಳದ ಕಣ್ಣೂರಿನ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಬಂಧಿಸಿದ್ದರು.
ಎರಡು ವರ್ಷಗಳಿಂದ ವಿದೇಶದಲ್ಲಿದ್ದ ಆತ ಕತಾರ್‌ನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಲೇ ಎನ್‌ಐಎ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿಯು ಇತರ ಸಹಚರರ ಜೊತೆಗೆ ತಪ್ಪಿಸಿಕೊಂಡು ಹೋಗಲು ಬಳಸಿದ್ದ ಮಾರುತಿ 800 ಕಾರು ಹಾಗೂ ಬೈಕನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.