33
ಉಳ್ಳಾಲ: ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಉಳ್ಳಾಲದ ಮಿಲ್ಲತ್‌ನಗರದಲ್ಲಿ ಮನೆಯೊಂದಕ್ಕೆ ನೀರು ನುಗ್ಗಿದ್ದು ಮನೆ ಖಾಲಿ ಮಾಡಿದ ಕೆಲವೇ ಕ್ಷಣಗಳಲ್ಲಿ ಮನೆಯ ಯಜಮಾನ ಹೃದಯಾಘಾತದಿಂದ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತಪಟ್ಟವರು ಮಿಲ್ಲತ್ ನಗರ ನಿವಾಸಿ ರಫೀಕ್ (55) ಎಂದು ತಿಳಿದು ಬಂದಿದೆ.
ಬುಧವಾರ ರಾತ್ರಿ ಸುರಿದ ಮಳೆಗೆ ಕೃತಕ ನೆರೆಯಾಗಿದ್ದು ಮನೆಯೊಳಗೆ ಮಳೆ ನೀರು ನುಗ್ಗಿದ್ದರಿಂದ ಮನೆಯೊಳಗಿದ್ದ ಸಾಮಗ್ರಿಗಳನ್ನು ಖಾಲಿ ಮಾಡಿ ಸಂಬಂಧಿಕರ ಮನೆಗೆ ಹೊರಟಿದ್ದರು. ಈ ಸಂದರ್ಭ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.