ಭರಮಸಾಗರ: ದಾವಣಗೆರೆ ತಾಲೂಕು ಲಕ್ಕಮುತ್ತೇನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಅರ್ಚಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಘಟನೆ ಗುರುವಾರ ರಾತ್ರಿ ನಡೆದಿದೆ.
ಮೃತ ಅರ್ಚಕರು ಯರಗುಂಟೆ ಗ್ರಾಮದ ಡಿ.ಎನ್.ಬಾಲಸುಬ್ರಹ್ಮಣ್ಯಂ (54) ಎಂದು ತಿಳಿದು ಬಂದಿದೆ.
ಸ್ವಿಫ್ಟ್ ಕಾರಿನಲ್ಲಿ ಬಾಲಸುಬ್ರಹ್ಮಣ್ಯಂ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತ ನಡೆಸಿದ ಅಪರಿಚಿತ ವಾಹನ ನಿಲ್ಲಿಸದೆ ಪರಾರಿಯಾಗಿದೆ ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡಿದ್ದ ಅರ್ಚಕರಿಗೆ ಪ್ರಥಮ ಚಿಕಿತ್ಸೆ ನೀಡುವ ವೇಳೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.