28
ಮಣಿಪಾಲ: ಹೆರ್ಗ ಗ್ರಾಮದ ಈಶ್ವರನಗರದ ಅಪಾರ್ಟ್‌ಮೆಂಟ್ ವೊಂದರಲ್ಲಿ ಮಹಿಳೆಯನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿ ಹೊನ್ನಾವರದ ಗಣೇಶ್ ಗಣಪ ನಾಯ್ಕ ಎಂದು ತಿಳಿದು ಬಂದಿದೆ.
ಬುಧವಾರ ಸಂಜೆ ವೇಳೆ ಬಂದ ಖಚಿತ ಮಾಹಿತಿ ಆಧಾರಿಸಿ ಮಣಿಪಾಲ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯೋರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ನೊಂದ ಮಹಿಳೆಯನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.