Home News ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಆತ್ಮಹತ್ಯೆ

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಆತ್ಮಹತ್ಯೆ

by admin
0 comments

ಉತ್ತರ ಪ್ರದೇಶ: ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​​ನಲ್ಲಿ ವರದಿಯಾಗಿದೆ.

ಮೂವರು ಅಪ್ರಾಪ್ತರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದರು. ಸಂತ್ರಸ್ತೆಯ ತಾಯಿ ಪ್ರಕರಣ ದಾಖಲಿಸಿದ ಬಳಿಕ ಪೊಲೀಸರು ಮೂವರು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದರು. ಈ ಘಟನೆಯಿಂದ ಬಾಲಕಿ ಮುಜುಗರಕ್ಕೀಡಾಗಿದ್ದಳು, ಸಮಾಜವನ್ನು ಎದುರಿಸುವುದು ಹೇಗೆ ಎಂಬುದೇ ಆಕೆಗೆ ತೋಚುತ್ತಿರಲಿಲ್ಲ.

ಜೂನ್ 28ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ , ಬಾಲಕಿ ಹಾಗೂ ಆಕೆಯ ಮೂರು ವರ್ಷದ ತಮ್ಮ ವರಾಂಡದಲ್ಲಿ ಕುಳಿತಿದ್ದಳು. ಆಕೆಯ ತಾಯಿ ಕೆಲಸಕ್ಕೆ ಹೋಗಿದ್ದರು. ಆಗ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ವಿಪಿನ್ ಆಕೆಯ ಮನೆ ಮುಂದೆ ಬೈಕ್ ನಿಲ್ಲಿಸಿದ್ದ. ಆತ ವಿಶಾಲ್ ಹಾಗೂ ಹೇಮಂತ್ ಜತೆ ಅಲ್ಲಿಗೆ ಬಂದಿದ್ದ. ಬಾಲಕಿಯ ತಮ್ಮನ ಬಳಿ ಬೈಕ್​​ನಲ್ಲಿ ಒಂದು ರೈಡ್ ಹೋಗಿ ಬರೋಣ ಅಕ್ಕನನ್ನು ಕರೆದುಕೊಂಡು ಬಾ ಎಂದು ಹೇಳಿ ಬೈಕ್​ನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ.

ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದರು, ಅಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲಿಂದ ನೇಹಾ ಚಿಕ್ಕಮ್ಮನ ಮನೆಗೆ ಹೋಗಿದ್ದಾಳೆ. ಎರಡು ದಿನಗಳ ಕಾಲ ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಬಳಿಕ ಮನೆಯವರು ತುಂಬಾ ವಿಚಾರಿಸಿದಾಗ ಆಕೆ ತನಗಾದ ನೋವಿನ ಕುರಿತು ಹೇಳಿಕೊಂಡಿದ್ದಾಳೆ. ಬಳಿಕ ಆಕೆಯ ಮನೆಗೆ ಕರೆದುಕೊಂಡು ಬಂದು ಕೂಡಲೇ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಲಾಯಿತು. ಪ್ರಕರಣದಲ್ಲಿ ಮೂವರು ಹುಡುಗರು ಭಾಗಿಯಾಗಿರುವುದಾಗಿ ತಿಳಿದು ಬಂದಿದೆ.

banner

ಜುಲೈ 2ರಂದು ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಎರಡು ವಾರಗಳ ನಂತರ ಜುಲೈ 15ರಂದು ಬಾಲಕಿಯ ತಾಯಿ ಕೆಲಸದಿಂದ ಹಿಂದಿರುಗಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಗಮನಿಸಿದರು. ತಾಯಿ ಪಕ್ಕದ ಮನೆಯ ಛಾವಣಿಯಿಂದ ಮನೆಯೊಳಗೆ ಬಂದಾಗ ಮಗಳು ನೇಣು ಹಾಕಿಕೊಂಡಿರುವುದನ್ನು ನೋಡಿ ಆಘಾತಕ್ಕೊಳಗಾಗಿದ್ದರು ಎಂದು ವರದಿ ತಿಳಿಸಿದೆ.

ಈ ಘಟನೆ ನಡೆದಾಗಿನಿಂದ ಆಕೆ ಮಾನಸಿಕ ಒತ್ತಡದಲ್ಲಿದ್ದಳು, ಮನೆಯೊಳಗೇ ಇರುತ್ತಿದ್ದಳು, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿದಸಿದ್ದಾರೆ ಎಂದು ವರದಿ ತಿಳಿಸಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.