Home News ದೆಹಲಿ, ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ

ದೆಹಲಿ, ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ

by admin
0 comments

ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ 50 ಹಾಗೂ ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ.

ದೆಹಲಿಯ ಪಶ್ಚಿಮ ವಿಹಾರ್‌ನಲ್ಲಿರುವ ರಿಚ್‌ಮಂಡ್ ಶಾಲೆಗೆ ಬೆದರಿಕೆ ಸಂದೇಶ ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಸದ್ಯ ಶಾಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ಒಟ್ಟು ದೆಹಲಿಯ 50ಕ್ಕೂ ಅಧಿಕ ಶಾಲೆಗಳಲ್ಲಿ ಬಾಂಬ್ ಬೆದರಿಕೆ ಮೇಲ್ ಹಾಗೂ ಕರೆ ಬಂದಿದ್ದು, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ.

ಮತ್ತೊಂದೆಡೆ ಬೆಂಗಳೂರಿನ ಆರ್‌ಆರ್ ನಗರ, ಕೆಂಗೇರಿ ಸೇರಿದಂತೆ ಒಟ್ಟು 40 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಬಾಂಬ್ ಬೆದರಿಕೆ ಬಂದ ಹಿನ್ನೆಲೆ ಮಕ್ಕಳನ್ನು ಹೊರಗೆ ಕಳುಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

banner

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬಾಂಬ್ ನಿಷ್ಕ್ರಿಯ ದಳದಿಂದಲೂ ಪರಿಶೀಲನೆ ನಡೆದಿದೆ ಎಂದು ತಿಳಿದು ಬಂದಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.