21
ಮಂಗಳೂರು: ಕಾವೂರು ಜಂಕ್ಷನ್ ಸಮೀಪ ಸಾರ್ವಜನಿಕ ಪ್ರದೇಶದಲ್ಲಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಯುವಕನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬೆಂಗ್ರೆ ಶ್ಯಾಂಡ್ಸ್‌ಪಿಟ್ ನಿವಾಸಿ ಸುಹಾಲ್ ಸಿ. ಪುತ್ರನ್(19) ಎಂದು ತಿಳಿದು ಬಂದಿದೆ.
ಕಾವೂರು ಠಾಣೆಯ ಪೊಲೀಸ್ ಉಪನಿರೀಕ್ಷಕ ಮಲ್ಲಿಕಾರ್ಜುನ್ ಬಿರಾದರ್ ಅವರು ಗುರುವಾರ ಗಸ್ತು ನಡೆಸುತ್ತಿದ್ದ ವೇಳೆ ಸುಹಾಲ್ ಮಾದಕ ವಸ್ತು ಸೇವಿಸಿರುವಂತೆ ಕಂಡು ಬಂದಿದ್ದ. ಆತನನ್ನು ವಶಕ್ಕೆ ಪಡೆದ ಪೊಲೀಸರು ತಪಾಸಣೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.