ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯಲ್ಲಿ ಕ್ವಾಟ್ರಸ್ ನಲ್ಲೇ ಹೆಡ್ ಕಾನ್‌ಸ್ಟೇಬಲ್
ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್‌ಸ್ಟೇಬಲ್ ಕಾಂತರಾಜ್ (45) ಎಂದು ತಿಳಿದು ಬಂದಿದೆ.
ತರೀಕೆರೆ ತಾಲೂಕಿನ ಸುಣ್ಣದಹಳ್ಳಿ ಮೂಲದವರಾದ ಕಾಂತರಾಜ್ ಚಿಕ್ಕಮಗಳೂರು ಎಸ್ಪಿ ಕಚೇರಿಯಲ್ಲಿ ಕಂಪ್ಯೂಟರ್ ಸೆಕ್ಷನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈ ಹಿಂದೆ ನಡೆದ ಅಪಘಾತವೊಂದರಲ್ಲಿ ಕಾಂತರಾಜು ತನ್ನ ಬಲಗಾಲು ಕಳೆದುಕೊಂಡಿದ್ದು ಕೃತಕ ಕಾಲು ಜೋಡಣೆ ಮೂಲಕ ಕೆಲಸ ಮಾಡುತ್ತಿದ್ದರು. ಅಲ್ಲದೇ ಅಪಘಾತದಲ್ಲಿ ಕಾಲು ಕಳೆದುಕೊಂಡಾಗಿನಿಂದ ಕಾಂತರಾಜ್ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಈ ನಡುವೆ ಕುಟುಂಬ ಸದಸ್ಯರು ಊರಿಗೆ ತೆರಳಿದ ವೇಳೆ ಕ್ವಾಟ್ರಸ್ ನಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.