Home News ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ: 3 ಆನೆಗಳು ಮೃತ್ಯು

ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ: 3 ಆನೆಗಳು ಮೃತ್ಯು

by admin
0 comments

ಕೋಲ್ಕತಾ: ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿ 2 ಮರಿಗಳು ಸಹಿತ 3 ಆನೆಗಳು ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಬನ್‌ಸ್ತಾಲಾ ರೈಲು ನಿಲ್ದಾಣದ ಬಳಿ ವರದಿಯಾಗಿದೆ.

ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಜಾರ್ಖಂಡ್‌ ದಾಲ್ಮಾ ಅರಣ್ಯದಿಂದ ಬಂದಿದ್ದ ಆನೆಗಳ ಹಿಂಡು ರೈಲು ಹಳಿ ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ಖರಗ್‌ಪುರ-ಟಾಟಾನಗರ ಮಾರ್ಗದ ವೇಗವಾಗಿ ಬಂದ ಜನಶತಾಬಿ ಎಕ್ಸ್‌ಪ್ರೆಸ್ ರೈಲು ಆನೆಗಳಿಗೆ ಡಿಕ್ಕಿ ಹೊಡೆದಿದೆ ಎಂದು ಅವರು ತಿಳಿಸಿದ್ದಾರೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.