ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಚಿತ್ರೀಕರಣದ ಸಂದರ್ಭದಲ್ಲಿ ಗಾಯಗೊಂಡಿರುವ ಕುರಿತು ವರದಿಯಾಗಿದೆ.
ಶಾರುಖ್ ಖಾನ್ ಅವರು ಕಾಣಿಸಿಕೊಳ್ಳುತ್ತಿರುವ ‘ಕಿಂಗ್’ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಅವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಮುಂಬೈನ ಗೋಲ್ಡನ್ ಟೊಬ್ಯಾಕೊ ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಚಿತ್ರೀಕರಣದ ಸೆಟ್‌ನಲ್ಲಿ ಆ್ಯಕ್ಷನ್ ದೃಶ್ಯವನ್ನು ಚಿತ್ರೀಕರಿಸುವ ಸಂದರ್ಭದಲ್ಲಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
ನಟನಿಗೆ ಗಂಭೀರ ಪ್ರಮಾಣದ ಗಾಯವಾಗದಿದ್ದರೂ, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಅವರು ಯುಎಸ್‌ಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಹೇಳಲಾಗಿದೆ.
ಒಂದು ತಿಂಗಳ ಕಾಲ ಅವರಿಗೆ ವಿರಾಮ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆ ಎಂದು ವರದಿ ತಿಳಿಸಿದೆ.
ಶಾರುಖ್ ಗಾಯಗೊಂಡ ಹಿನ್ನೆಲೆ ‘ಕಿಂಗ್’ ಚಿತ್ರೀಕರಣವನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ.