2
ಸುರತ್ಕಲ್: ಕೃಷ್ಣಾಪುರ 6ನೇ ಬ್ಲಾಕ್ ನಲ್ಲಿ ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಮೃತ ಯುವಕ ಕೃಷ್ಣಾಪುರ 6ನೇ ಬ್ಲಾಕ್ ನಿವಾಸಿ ಮುಹಮ್ಮದ್ ಯೂನಸ್ ಎಂದು ತಿಳಿದು ಬಂದಿದೆ.
ಇವರು ಸೌದಿ ಅರೆಬಿಯಾದ ಅಲ್ ಕೋಬರ್ ನಲ್ಲಿ ಕೆಲಸದಲ್ಲಿದ್ದು, 15ದಿನಗಳ ರಜೆ ಪಡೆದು ಊರಿಗೆ ಬಂದಿದ್ದರು ಎಂದು ಹೇಳಲಾಗಿದೆ.
ಶುಕ್ರವಾರ ರಾತ್ರಿ ಮನೆಯಲ್ಲಿ ಊಟ ಮಾಡಿ ಮನೆಮಂದಿಯೊಂದಿಗೆ ಕುಳಿತು ಮಾತನಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಆ ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.