4
ಮೈಸೂರು: ಮೈಸೂರು ತಾಲೂಕಿನ ಮೀನಾಕ್ಷಿಪುರ ಬಳಿಯ ಕೆಆರ್ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟವರು ಪ್ರಶಾಂತ್, ಸಿದ್ದ ಮತ್ತು ಕೃಷ್ಣ ಎಂದು ತಿಳಿದು ಬಂದಿದೆ.
ಮೃತರು ಮಂಡ್ಯದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಪತ್ತೆ ಮಾಡಿದ್ದಾರೆ.
ಈ ಕುರಿತು ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.