451
ಬಂಟ್ವಾಳ: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ 27ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಪೊಲೀಸರು 11ನೇ ಆರೋಪಿಯನ್ನು ಸೋಮವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿ ಅಮ್ಮುಂಜೆ ಗ್ರಾಮದ ಶಾಹಿತ್ ಯಾನೆ ಸಾಹಿತ್ (24) ಎಂದು ತಿಳಿದು ಬಂದಿದೆ.
ನ್ಯಾಯಾಲಯವು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಪ್ರಕರಣದಲ್ಲಿ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಪ್ರಸ್ತುತ ಅವರೆಲ್ಲ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.