279
ವಿಟ್ಲ: ಟಿಪ್ಪರ್ ಮತ್ತು ಕಾರಿನ ನಡುವೆ ಅಪಘಾತದಿಂದ ಗಂಭೀರ ಗಾಯಗೊಂಡು ನವವಿವಾಹಿತ ಮೃತಪಟ್ಟ ಘಟನೆ ನಡೆದಿದೆ.
ಮೃತ ನವವಿವಾಹಿತ ಅಶ್ವಥಾಡಿ ನಿವಾಸಿ ಅನೀಶ್ ಗೌಡ (32) ಎಂದು ತಿಳಿದು ಬಂದಿದೆ.
ಕಾರಿನನಲ್ಲಿ ಪ್ರಯಾಣಿಸುತ್ತಿದ್ದ ಉಳಿದ ಪ್ರಯಾಣಿಕರಿಗೂ ಗಂಭೀರ ಗಾಯಗಳಾಗಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅನಂತಾಡಿ ಕಡೆಯಿಂದ ವಿಟ್ಲ ಕಡೆ ಬರುತ್ತಿದ್ದ ಕಾರಿಗೆ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದವರು ಆಸ್ಪತ್ರೆಗೆ ದಾಖಲಾಗಿದ್ದರು.
ಗಂಭೀರ ಗಾಯಗೊಂಡಿದ್ದ ಅನೀಶ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಅನೀಶ್ ಗೌಡ ರವರು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.